ಜೋಡಿ ಕೊಲೆ ಪ್ರಕರಣ: ಪಾಲಿಕೆ ಮಾಜಿ ಸದಸ್ಯ ಕೋರ್ಟಗೆ ಹಾಜರ್
ಸಾಂಸ್ಕೃತಿಕ ನಗರಿಯನ್ನು ಬೆಚ್ಚಿ ಬೀಳಿಸಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಮಾಜಿ ಸದಸ್ಯ ಕೋರ್ಟಗೆ ಹಾಜರಾಗಿದ್ದಾನೆ.
ಮೈಸೂರು ಜೋಡಿ ಕೊಲೆ ಪ್ರಕರಣ ಹಿನ್ನಲೆ.ಪ್ರಮುಖ ಆರೋಪಿಗಳ ಜೊತೆ ಪಾಲಿಕೆ ಮಾಜಿ ಸದಸ್ಯ ಕೋರ್ಟ್‌ಗೆ ಹಾಜರಾಗಿದ್ದಾನೆ. ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅವ್ವ ಮಾದೇಶ್ ಅಲಿಯಾಸ್ ಸಿ.ಮಾದೇಶ್ ನನ್ನು ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.