ಮಡಿಕೇರಿ: ಸೋಮವಾರಪೇಟೆಯಲ್ಲಿ ನಿಶ್ಚಿತಾರ್ಥವಾಗಿದ್ದ ಹುಡುಗನಿಂದಲೇ ಬಾಲಕಿಯ ರುಂಡ ಕಡಿದ ಪ್ರಕರಣ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಕೊಲೆಯಾದ ಬಾಲಕಿಯ ಮನೆಗೆ ಇಂದು ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದೊಂದು ಭೀಕರವಾದ ಘಟನೆ. ಮನುಷ್ಯರು ಯಾರೂ ಒಪ್ಪದಂತಹ ಘಟನೆ. ಇಂತಹ ಘಟನೆ ನಡೆಯಬಾರದಿತ್ತು. ಪ್ರಕರಣದ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ನೇಮಕ ಮಾಡಲಾಗುವುದು ಎಂದರು.
ಬಾಲಕಿಯ ಪೋಷಕರಿಗೆ ಚುನಾವಣಾ ನೀತಿ ಸಂಹಿತೆ ಮುಗಿದ ಕೂಡಲೇ ಪರಿಹಾರ ನೀಡುತ್ತೇವೆ.