ಡಾ. ಜಯಕರ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ

ಮಂಗಳವಾರ, 12 ಜುಲೈ 2022 (06:06 IST)
ಬೆಂಗಳೂರು : ಮಾರುತಿ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಆಂಡ್ ರಿಸರ್ಚ್, ಪ್ರಾಸ್ಥೋಡೆಂಟಿಕ್ಸ್ ವಿಭಾಗದ ಪ್ರಾಂಶುಪಾಲ ಹಾಗೂ ಮುಖ್ಯಸ್ಥರಾಗಿರುವ ಡಾ. ಜಯಕರ ಎಸ್.ಎಂ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಯನ್ನಾಗಿ ಸೋಮವಾರ ನೇಮಿಸಲಾಗಿದೆ.
 
ಜಯಕರ ಅವರನ್ನು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಯನ್ನಾಗಿ 4 ವರ್ಷಗಳ ಅವಧಿಗೆ ನೇಮಿಸಿದ್ದಾರೆ.

ನಿರ್ಗಮಿಸುತ್ತಿರುವ ಪ್ರಭಾರ ಕುಲಪತಿಗಳಾದ ಪ್ರೊ. ಸಿಂಥಿಯಾ ಮೆನೆಜಸ್ ಅವರಿಂದ ಜಯಕರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಬಗ್ಗೆ ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ