ನಾಡೋಜ ಡಾ.ಪಾಟೀಲ್ ಪುಟ್ಟಪ್ಪ ನಿಧನ

ಮಂಗಳವಾರ, 17 ಮಾರ್ಚ್ 2020 (09:44 IST)
ಹುಬ್ಬಳ್ಳಿ : ಹಿರಿಯ ಪತ್ರಕರ್ತ, ರಾಜ್ಯ ಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ್ ಪುಟ್ಟಪ್ಪ (102)ಸೋಮವಾರ ನಿಧನರಾಗಿದ್ದಾರೆ.


ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಫೆ.10ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಮವಾರ ರಾತ್ರಿ ಸುಮಾರು10 ಗಂಟೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


ಹುಬ್ಬಳ್ಳಿಯ ಮನೆಯಲ್ಲಿ ಇಂದು ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಬಳಿಕ ಹಾವೇರಿಯ ರಾಣಿಬೆನ್ನೂರಿನ ಅವರ ಸ್ವಗ್ರಾಮ ಹಲಗೇರಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ