ಉ.ಕನ್ನಡ ಜನತೆಗೆ ಮಣಿದ ಡಾ.ಸುಧಾಕರ್​

ಸೋಮವಾರ, 25 ಜುಲೈ 2022 (20:14 IST)
ಶಿರೂರಿನಲ್ಲಿ ಆ್ಯಂಬುಲೆನ್ಸ್ ಅಪಘಾತ ನಡೆದ ಬಳಿಕ ಉತ್ತರ ಕರ್ನಾಟಕ ಜನತೆ ರೊಚ್ಚಿಗೆದ್ದಿದ್ದಾರೆ. ಕಳೆದ ಕೆಲ ದಿನಗಳಿಂದ ಇದೇ ವಿಚಾರವಾಗಿ ಟ್ವಿಟ್ಟರ್ ಅಭಿಯಾನ ನಡೆಸುತ್ತಿರುವ ಉತ್ತರ ಕರ್ನಾಟಕ ಜಿಲ್ಲೆಯ ಜನರು, ನೋ ಹಾಸ್ಪಿಟಲ್, ನೋ ವೋಟ್ ಎಂಬ ಹ್ಯಾಶ್ ಟ್ಯಾಗ್ ಬಳಸಿ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಪವರ್ ಟಿವಿ ಕೂಡ ಈ ಕುರಿತು ಅಭಿಯಾನ ನಡೆಸಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆ ನೀಡಿದ್ದಾರೆ. ವೀ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿತ್ತು. ಇದೀಗ ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ & ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ & ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಸಿಎಂ ಬೊಮ್ಮಾಯಿ ಅವರೊಂದಿಗೆ, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾ ಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ