ಸಂವಿಧಾನ ಪೀಠಿಕೆ ಓದು’ಗೆ ಚಾಲನೆ

ಶುಕ್ರವಾರ, 15 ಸೆಪ್ಟಂಬರ್ 2023 (17:49 IST)
ವಿಧಾನಸೌಧದಲ್ಲಿ ‘ಸಂವಿಧಾನ ಪೀಠಿಕೆಯ ಓದು’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟು, ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ವಿಶ್ವದ ಅನೇಕ ದೇಶಗಳಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದಾರೆ. ಸಿಂಧೂ ನಾಗರಿಕತೆ ಕಾಲದಿಂದಲೂ ಪ್ರಜಾಪ್ರಭುತ್ವದ ವ್ಯವಸ್ಥೆ ಇತ್ತು. ಬುದ್ಧ, ಬಸವಣ್ಣ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿ ಇತ್ತು. ಹಿಂದೆ ಗಣತಂತ್ರ ಅಂತಾ ಕರೆಯಲಾಗುತ್ತಿತ್ತು. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದೆ. ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು. ಆರ್ಥಿಕ, ಸಾಮಾಜಿಕವಾಗಿ‌ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಅವಕಾಶ ವಂಚಿತರ ಪರವಾಗಿ ನಾವು ಕೆಲಸ ಮಾಡುತ್ತಿದ್ದೇವೆ. 5 ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವೆಲ್ಲರೂ ಉಳಿದ ಹಾಗೆ. ಮಕ್ಕಳಿಗೂ ಸಹ ಸಂವಿಧಾನದ ಅರಿವು ಇರಬೇಕು. ಶಾಲಾ-ಕಾಲೇಜುಗಳಲ್ಲೂ ಸಂವಿಧಾನದ ಬಗ್ಗೆ ತಿಳಿಸಿಕೊಡಬೇಕು. ಸಂವಿಧಾನ ವಿರೋಧ ಮಾಡುವವರ ಬಗ್ಗೆ ಜಾಗೃತರಾಗಿ ಇರಬೇಕು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ