ಇಂದು ವಿಶ್ವವಿಖ್ಯಾತ ಮೈಸೂರು ದಸರಾ 2020ಕ್ಕೆ ಚಾಲನೆ

ಶನಿವಾರ, 17 ಅಕ್ಟೋಬರ್ 2020 (09:49 IST)
ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ 2020ಕ್ಕೆ ಚಾಲನೆ ನೀಡಲಾಗಿದೆ. ಜಯದೇವ ಆಸ್ಪತ್ರೆ ನಿರ್ದೇಶಕ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

ಈ ಕಾರ್ಯಕ್ರಮದ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವರು, ಶಾಸಕರು ಉಪಸ್ಥಿತರಿದ್ದರು. ಈ ಬಾರಿ ದಸರಾ ಉತ್ಸವವನ್ನು ಕೊರೊನಾ ವಿರುದ್ಧ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿದ ಕೊರೊನಾ ವಾರಿಯರ್ಸ್ ಗೆ ಮುಡಿಪಾಗಿಡಲಾಗಿದೆ. ಆದಕಾರಣ ಈ ಬಾರಿ ಉತ್ಸವಕ್ಕೆ  ಡಾ.ಸಿ.ಎನ್.ಮಂಜುನಾಥ್ ಅವರಿಂದ ಉದ್ಘಾಟನೆ ಮಾಡಿಸಲಾಗಿದೆ.

ಹಾಗೇ ಕೊರೊನಾ ವಾರಿಯರ್ಸ್ ಅವರಿಗೆ ಸಿಎಂ ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ಕೊರೊನಾ ಭೀತಿ ಹಿನ್ನಲೆಯಲ್ಲಿ ಈ ಬಾರಿ ಅತ್ಯಂತ ಸರಳ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲಾಗುವುದು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ