ಭೀಕರ ಅಪಘಾತದಲ್ಲಿ ವಾಣಿಜ್ಯ ತೆರಿಗೆಯ ಇಲಾಖೆಯ ಚಾಲಕ ಸಾವು

ಸೋಮವಾರ, 21 ಆಗಸ್ಟ್ 2023 (08:45 IST)
ಹುಬ್ಬಳ್ಳಿ : ನಗರದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಚಾಲಕ ಸಾವಿಗೀಡಾಗಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಾಣಿಜ್ಯ ತೆರಿಗೆಯ ಇಲಾಖೆಯ ಇಬ್ಬರು ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗದಗ ರಸ್ತೆಯ ರಿಂಗ್ ರೋಡ್ ಬಳಿ ಮೂರು ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಇಲಾಖೆಯ ಟಾಟಾ ಸುಮೋ ವಾಹನಕ್ಕೆ ಹಿಂಬಂದಿಯಿಂದ ಲಾರಿ ಬಂದು ಡಿಕ್ಕಿಹೊಡೆದಿದೆ.

ಈ ಅವಘಡದಲ್ಲಿ ಇಲಾಖೆಯ ಚಾಲಕ ರಫೀಕ್ ನದಾಪ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಾಗೃತಿ ಕಾರ್ಯಕ್ಕಾಗಿ ಅಧಿಕಾರಿಗಳೊಂದಿಗೆ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ