ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹೆಚ್ಎಸ್ಆರ್ ಲೇಔಟ್ನಲ್ಲಿ ಪಾರ್ಟಿ ಮುಗಿಸಿ ತಡರಾತ್ರಿ 2 ಗಂಟೆ ವೇಳೆ ಮುರುಗೇಶ್ ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಇದರಂತೆ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದಾನೆ. ಆದರೆ ಮಾರ್ಗ ಮಧ್ಯೆ ಚಾಲಕ ದೈಹಿಕ ದೌರ್ಜನ್ಯ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪಾರ್ಟಿಯಲ್ಲಿ ಯುವತಿ ಮದ್ಯ ಸೇವನೆ ಮಾಡಿದ್ದಳು ಎನ್ನಲಾಗುತ್ತಿದ್ದು, ಈ ಬಗ್ಗೆ ಇನ್ನಷ್ಟೇ ದೃಢವಾಗಬೇಕಿದೆ.