ಬರಗಾಲದ ಇಫೆಕ್ಟ್: ಸದ್ಯದಲ್ಲೇ ಬೆಲೆ ಏರಿಕೆ ಖಚಿತ
ಬರಗಾಲದಿಂದಾಗಿ ಈಗಾಗಲೇ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಜೊತೆಗೆ ನೀರಿಲ್ಲದೇ ರೈತರೂ ಸೂಕ್ತ ರೀತಿಯಲ್ಲಿ ಬೆಳೆ ಬೆಳೆಯಲಾಗುತ್ತಿಲ್ಲ. ಇದರಿಂದಾಗಿ ಆಹಾರ ಧಾನ್ಯಗಳ ಅಭಾವ ಎದುರಾಗಿದೆ.
ಈಗಾಗಲೇ ಬೇಳೆ, ಕಾಳುಗಳ ಬೆಲೆ ಹೆಚ್ಚಳವಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 40 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು 30 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ಹಿಂಗಾರಿನಲ್ಲೂ ಇದೇ ಪರಿಸ್ಥಿತಿ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ.