ಪ್ರಧಾನಿ ಭೇಟಿಗೆ ತೆರಳಲಿರುವ ಸಿಎಂ ನೇತೃತ್ವದ ನಿಯೋಗ

ಶುಕ್ರವಾರ, 30 ಡಿಸೆಂಬರ್ 2016 (13:50 IST)
ರಾಜ್ಯದಲ್ಲಿ ಉಂಟಾಗಿರುವ ಬರಸ್ಥಿತಿ ಬಗ್ಗೆ ವಿವರಿಸಿ ಕೇಂದ್ರದಿಂದ ಹೆಚ್ಚಿನ ನೆರವು ಕೋರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ನಿಯೋಗದೊಂದಿಗೆ ನಾಳೆ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿಯಾಗುವರು.
 
ಸಂಜೆ 7 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗ ಪ್ರಧಾನ ಮಂತ್ರಿಯವರನ್ನು ಭೇಟಿಯಾಗಲಿದೆ. ನಿಯೋಗದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರು ಭಾಗಿಯಾಗುವರು. 
 
ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಚಿವರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಕೃಷಿ, ಕಂದಾಯ ಮತ್ತು ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಸಚಿವರು ಮುಖ್ಯಮಂತ್ರಿಗಳೊಂದಿಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ