ಬೆಂಗಳೂರು: ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ ಎಂದು ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.
ಬರ ಪರಿಹಾರ ಬಿಡುಗಡೆ ವಿಚಾರವಾಗಿ ಬರ ಪರಿಹಾರ ವಿಚಾರವಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಸರ್ಕಾರವು 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ.
ಇದಕ್ಕೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ. ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್ ಸರ್ಕಾರ ಎಷ್ಟೇ ದೊಡ್ಡ ಸವಾಲುಗಳನ್ನಾದರೂ ಸ್ವೀಕರಿಸಲು ಸಿದ್ಧವಿದೆ. ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ.
ಬರ ಪರಿಹಾರ ಬಿಡುಗಡೆ ಸಂಬಂಧ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಅದಕ್ಕೆ ಸ್ಪಂದಿಸದಿರುವ ಕೇಂದ್ರ ಮೋದಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರದ ಶಾಸಕರು, ಸಚಿವರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.
ಇದೀಗ ಕೊನೆಗೂ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದ್ದರು ಕಾಂಗ್ರೆಸ್ ನಾಯಕರು ಮಾತ್ರ ಅಸಮಾಧಾನ ಹೊರಹಾಕುತ್ತಿದ್ದಾರೆ