ಸ್ಯಾಂಡಲ್ ವುಡ್ ಕೆಲ ನಟ, ನಟಿಯರು ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ವಿಚಾರಣೆಗೆ ಒಳಪಡುತ್ತಿದ್ದಾರೆ.
ಮಾದಕವಸ್ತು ಸೇವನೆ/ ಮಾರಾಟದ ಆರೋಪಿಗಳ ವಿರುದ್ಧ
@CMofKarnataka ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಬಂಧಿತರಲ್ಲಿ ಕೆಲವರಿಗೆ
@BJP4Karnataka ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು, ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು.
ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? - ಈ ಎಲ್ಲ ವಿವರ ಕೇಳಿ ಗೃಹ ಸಚಿವ
@BSBommai ಅವರಿಗೆ ಪತ್ರ ಬರೆದಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.