ಪ್ರಕರಣದ ದೋಷಾರೋಪ ಪಟ್ಟಿಯ ಪ್ರಕಾರ, ಕುಡಿದು ವಾಹನ ಚಲಾಯಿಸುತ್ತಿದ್ದ ಆರೋಪಿಗಳನ್ನು ತಡೆದು ಪ್ರಶ್ನಿಸಿದಾಗ ಅವರು ತಮ್ಮ ಮೇಲೆ ಹಲ್ಲೆ ನಡೆಸಿದರು. ಘಟನೆ ಸಂದರ್ಭದಲ್ಲಿಸ್ಥಳದಲ್ಲಿದ್ದ ಕೆಲ ಸಾರ್ವಜನಿಕರು ಆರೋಪಿಗಳನ್ನು ವಶಕ್ಕೆ ಪಡೆಯಲು ಸಹಾಯ ಮಾಡಿದರು ಎಂದು ಎಚ್‌ಎಎಲ್ ಟ್ರಾಫಿಕ್ ಇನ್‌ಸ್ಪೆಕ್ಟರ್ ಅವರ ದೂರಿನಲ್ಲಿ ಹೇಳಲಾಗಿದೆ. ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಪ್ರತ್ಯಕ್ಷದರ್ಶಿಗಳಾಗಿದ್ದಾರೆ. ಆದರೆ, ಸ್ಥಳದಲ್ಲಿದ್ದ ಸಾರ್ವಜನಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿಲ್ಲ. ಅವರಲ್ಲಿಯಾರೊಬ್ಬರನ್ನೂ ಪ್ರತ್ಯಕ್ಷದರ್ಶಿಗಳಾಗಿ ಗುರುತಿಸಲಾಗಿಲ್ಲಎಂದು ನ್ಯಾಯಾಲಯ ಆದೇಶದಲ್ಲಿಹೇಳಿದೆ.
ಸಂಚಾರಿ ವಿಭಾಗದ ಹೆಚ್ಚುವರಿ ಆಯುಕ್ತರು ಹೊರಡಿಸಿರುವ ಸುತ್ತೋಲೆ ಪ್ರಕಾರ, ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣಗಳಲ್ಲಿಪೊಲೀಸರು ದಂಡ ವಸೂಲಿ ಮಾಡಲು ಅವಕಾಶವಿಲ್ಲ. ದಂಡವನ್ನು ನ್ಯಾಯಾಲಯದಲ್ಲಿ ಮಾತ್ರ ಪಾವತಿ ಮಾಡಬೇಕು. ಆದರೆ, ಈ ಪ್ರಕರಣದಲ್ಲಿಪೊಲೀಸರು ಅರ್ಜಿದಾರರಿಂದ ದಂಡ ವಸೂಲಿಗೆ ಮುಂದಾಗಿದ್ದರು ಎನ್ನುವುದು ತಿಳಿದು ಬಂದಿದೆ. ಜತೆಗೆ, ತಪಾಸಣೆಯ ಸಂದರ್ಭದಲ್ಲಿ ವಿಡಿಯೋಗ್ರಫಿ ಮಾಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಆದರೆ, ಈ ಯಾವ ನಿಯಮಗಳನ್ನೂ ಪಾಲನೆ ಮಾಡಲಾಗಿಲ್ಲ. ಅರ್ಜಿದಾರರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲಎಂದು ಅಭಿಪ್ರಾಯಪಟ್ಟಿರುವ ಪೀಠ, ಅರ್ಜಿದಾರರನ್ನು ಪ್ರಕರಣದಿಂದ ಬಿಡುಗಡೆಗೊಳಿಸಿ ಆದೇಶಿಸಿದೆ.