ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆಹುತಿಯಾದ ಭೂಪ
ದುರದೃಷ್ಟವಶಾತ್ ಘಟನೆಯಲ್ಲಿ ಒಂದೂವರೆ ವರ್ಷದ ಕಿರಿ ಮಗ ಸಾವನ್ನಪ್ಪಿದ್ದು, ಇನ್ನೊಂದು ಮಗು ಮತ್ತು ಆರೋಪಿಗೆ ಗಾಯಗಳಾಗಿವೆ. ಆರೋಪಿಯನ್ನು ಶ್ರೀನಿವಾಸ ಮೂರ್ತಿ ಎಂದು ಗುರುತಿಸಲಾಗಿದೆ.
ಮದ್ಯಪಾನ ಬಿಟ್ಟು ಬಿಡುವಂತೆ ಪತ್ನಿ ಎಷ್ಟು ಹೇಳಿದರೂ ಈತ ಕಿವಿಗೊಟ್ಟಿರಲಿಲ್ಲ. ಇದೇ ಕಾರಣಕ್ಕೆ ಪತ್ನಿ ಕೋಪಿಸಿಕೊಂಡು ಮನೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶ್ರೀನಿವಾಸ ಮೂರ್ತಿ ತನ್ನ ಹಾಗೂ ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಕೃತ್ಯವೆಸಗಿದ್ದಾನೆ. ಆದರೆ ಮಕ್ಕಳ ಕಿರುಚಾಟ ಕೇಳಿ ನೆರೆಮನೆಯವರು ಧಾವಿಸಿ ಬೆಂಕಿ ನಂದಿಸಿದ್ದಾರೆ.