ಭಾರೀ ಮಳೆಯಿಂದಾಗಿ ಉಡುಪಿಯಲ್ಲಿ ರೈಲು ಸಂಚಾರ ಸ್ಥಗಿತ

ಬುಧವಾರ, 5 ಜುಲೈ 2023 (10:32 IST)
ಉಡುಪಿ : ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು.
 
ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ಸೂಚಿಸಲಾಗಿದೆ. 

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಮ್ 1077 ಹಾಗೂ ದೂರವಾಣಿ: 0824 – 2442590 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ