ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿ: ಸಿಎಂ ವಿಷಾದ

ಬುಧವಾರ, 21 ಡಿಸೆಂಬರ್ 2016 (19:02 IST)
ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಯಾಗದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. 
ಕೆಲ ಪಟ್ಟಭದ್ರ ಹಿತಾಸಕ್ತಿಗಳಿಂದಾಗಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತಿಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. 
 
ಸಮಾಜದಿಂದ ಮೌಢ್ಯಗಳನ್ನು ದೂರ ಮಾಡುವ  ಉದ್ದೇಶದಿಂದ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ರಾಜ್ಯ ಸರಕಾರ ಮುಂದಾಗಿತ್ತು. ಆದರೆ, ಈ ಕಾಯ್ದೆಗೆ ರಾಜ್ಯಾದ್ಯಂತ ಹಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಯ್ದೆಯನ್ನು ಕೈಬಿಡಲಾಗಿತ್ತು. ತಮ್ಮ ಆಡಳಿತ ಅವದಿಯಲ್ಲಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಯಾಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ