ಪ್ರತಿಷ್ಠೆ ಪಕ್ಕಕ್ಕಿಟ್ಟು ಬೇಡಿಕೆ ಈಡೇರಿಸಿ-ಮಾಜಿ ಸಿಎಂ H.D.ಕುಮಾರಸ್ವಾಮಿ

ಸೋಮವಾರ, 11 ಸೆಪ್ಟಂಬರ್ 2023 (18:00 IST)
ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಅವರು ಸರಣಿ ಟ್ವೀಟ್​ ಮಾಡಿದ್ದು, ಖಾಸಗಿ ಸಾರಿಗೆ ಒಕ್ಕೂಟಗಳ ಬೇಡಿಕೆಗಳು ಈಡೇರಿಸಲಾಗದ ಡಿಮ್ಯಾಂಡ್​ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ಸಲಹೆ ನೀಡಿದ್ದಾರೆ.. ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, 'ಗ್ಯಾರಂಟಿ ಬಾಧಿತರ' ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ