ಜನಾಕ್ರೋಶ ಯಾತ್ರೆ ಸಂಬಂಧ ಇಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಜನರ ಪರವಾಗಿ ಅಧಿಕಾರದಲ್ಲಿದ್ದಾಗ ಮಾತ್ರ ಕೆಲಸ ಮಾಡುವುದಲ್ಲ; ಪ್ರತಿಪಕ್ಷದಲ್ಲಿ ಇದ್ದಾಗ ಕೂಡ ಕೆಲಸ ಮಾಡಿದರೆ ಮಾತ್ರ ರಾಜಕೀಯ ಪಕ್ಷವೆಂದು ಅನಿಸಿಕೊಳ್ಳುತ್ತದೆ ಎಂದು ತಿಳಿಸಿದರು.
ನಮಗೆ ಇವತ್ತು ಅಧಿಕಾರ ಇಲ್ಲ; ಸಿದ್ದರಾಮಯ್ಯರವರು ನಡದಿದ್ದೇ ದಾರಿ ಎಂದು ನಾವು ಸುಮ್ಮನೆ ಕುಳಿತುಕೊಳ್ಳುಕೊಂಡರೆ ನೀವೆಲ್ಲರೂ ಕಣ್ಣೀರಿನಲ್ಲಿ ಕೈತೊಳೆಯುವ ಕೆಲಸವಾಗುತ್ತದೆ. ಅದಕ್ಕಾಗಿ ವಿಜಯೇಂದ್ರರ ನೇತೃತ್ವದಲ್ಲಿ, ನಮ್ಮೆಲ್ಲ ಹಿರಿಯ ನಾಯಕರು ನಾವೆಲ್ಲ ಈ ಜನಾಕ್ರೋಶ ಯಾತ್ರೆಯನ್ನು ಪ್ರಾರಂಭಿಸಿದ್ದೇವೆ. ನೀವುಗಳು ನಮ್ಮ ಜೊತೆ ಬನ್ನಿ; ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಬೇಕೆಂದು ನಿಶ್ಚಯ ಮಾಡಿದ್ದೇವೆ ಎಂದರು.