ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಸುಳ್ಳಿನ ವಿಜೃಂಭಣೆ ತಾತ್ಕಾಲಿಕ, ಸತ್ಯದ ಗೆಲುವು ಶಾಶ್ವತ

Sampriya

ಮಂಗಳವಾರ, 27 ಆಗಸ್ಟ್ 2024 (18:18 IST)
ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆಜೆ ಜಾರ್ಜ್ ಅವರ ಪಾತ್ರವಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದ ಬೆನಲ್ಲೇ ಬಿಜೆಪಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಆಗ್ರಹ ಮಾಡಿದೆ.

ಇಂದು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಹತ್ಯೆ  ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದು, ಈ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ಆದೇಶ ಹೊರಡಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ಸತ್ಯಮೇವ ಜಯತೆ ಎಂದು ಬರೆದುಕೊಂಡಿದೆ..

ನಿಧಾನವಾದರೂ ಸತ್ಯಕ್ಕೆ ಜಯ ಸಿಗುವುದು ನಿಶ್ಚಿತ ಎಂಬುದಕ್ಕೆ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ ಉತ್ತಮ ಉದಾಹರಣೆ. ಸಚಿವ ಕೆಜೆ ಜಾರ್ಜ್ ಅವರ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಬಿಜೆಪಿ ಪಕ್ಷದ ಸುಳ್ಳುಗಳಿಗೆ ಸುಪ್ರೀಂ ಕೋರ್ಟಿನ ತೀರ್ಪು ಮುಖಕ್ಕೆ ಹೊಡೆದ ರೀತಿ ಇದೆ.

ಸುಳ್ಳಿನ ವಿಜೃಂಭಣೆ ತಾತ್ಕಾಲಿಕ, ಸತ್ಯದ ಗೆಲುವು ಶಾಶ್ವತ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ, ನಮ್ಮ ಸಚಿವರ ಮೇಲೆ ಸುಳ್ಳು ಆರೋಪ ಮಾಡಿದ ಬಿಜೆಪಿ ಈಗ ಕ್ಷಮೆ ಕೇಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ