ತೇಜಸ್‌ಗೌಡ ಅಪಹರಣ ಪ್ರಕರಣ: ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್‌ಗೆ ಕ್ಲೀನ್ ಚೀಟ್

ಬುಧವಾರ, 5 ಅಕ್ಟೋಬರ್ 2016 (16:11 IST)
ತೇಜಸ್‌ಗೌಡ ಅಪಹರಣ ಪ್ರಕರಣದ ಕುರಿತು ಸಿಐಡಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಚಾರ್ಚ್‌ಶೀಟ್ ಸಲ್ಲಿಸಿದ್ದು, ಅಪಹರಣ ಪ್ರಕರಣದಲ್ಲಿ ಆರೋಪಿತನಾಗಿದ್ದ ಮೃತ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ. 
 
ಹಣಕ್ಕಾಗಿ ತೇಜಸ್ ಗೌಡ ಎನ್ನುವವರ ಅಪಹರಣ ಪ್ರಕರಣದಲ್ಲಿ ನಾಲ್ಕನೇಯ ಆರೋಪಿಯಾಗಿದ್ದ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ವಿರುದ್ಧದ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಅವರನ್ನು ನಿರ್ದೋಷಿ ಎಂದು ಚಾರ್ಚ್‌ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. 
 
ಪ್ರಕರಣ ಕುರಿತು ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರು ಜೆಎಂಎಫ್‌ಸಿ ಕೋರ್ಟ್‌ಗೆ ಚಾರ್ಚ್‌ಶೀಟ್ ಸಲ್ಲಿಸಿರುವುದನ್ನು ಆರೋಪಿ ಪ್ರವೀಣ ಖಾಂಡ್ಯ ಪರ ವಕೀಲರು ಖಚಿತ ಪಡಿಸಿದ್ದಾರೆ. 
 
ಪ್ರಕರಣದ ಎಲ್ಲಾ 9 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್ ಸಲ್ಲಿಕೆಯಾಗಿದ್ದು, ಒಟ್ಟು 400 ಪುಟಗಳ ವರದಿಯನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ