ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ : ಆರೋಪಿ ನಟರಾಜ್‌ ವಿಚಾರಣೆ

ಭಾನುವಾರ, 10 ಜುಲೈ 2016 (14:09 IST)
ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟರಾಜ್‌ನನ್ನು ಸಿಐಡಿ ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ. 
 
ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆಯಲ್ಲಿ ಸಿಐಡಿ ಎಸ್‌ಪಿ ರಾಜಪ್ಪ ನೇತೃತ್ವದಲ್ಲಿ ವಿಚಾರಣೆಯನ್ನು ಕೈಗೊಳ್ಳಲಾಗಿದೆ. 
 
ಕಲ್ಮನೆ ಚಿಟ್ ಫಂಢ್ ಮಾಲೀಕ ನಟರಾಜ್, ತೇಜಸ್ ಅಪಹರಣದ ಪ್ರಮುಖ ಆರೋಪಿಯಾಗಿದ್ದಾರೆ. ನ್ಯಾಯಾಂಗದ ಬಂಧನದಲ್ಲಿ ಇದ್ದ ನಟರಾಜ್‌ನ್ನು ವಿಚಾರಣೆಗಾಗಿ ಒಂದು ದಿನ ಮಟ್ಟಿಗೆ ನ್ಯಾಯಾಲಯದ ಅನುಮತಿ ಪಡೆದು ಕರೆ ತರಲಾಗಿದೆ.
 
ಅಪಹರಣಕ್ಕೆ ಬಳಸಲಾಗಿದ್ದ ವಾಹನವನ್ನು ಕೂಡ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ
 
ತೇಜಸ್ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಮತ್ತು 10 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕಲ್ಲಪ್ಪ ಅವರ ಮೇಲೆ ಕೇಳಿ ಬಂದಿತ್ತು. ಇದರಿಂದ ಮನನೊಂದು ಕಲ್ಲಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಲ್ಲಪ್ಪ ಆತ್ಮಹತ್ಯೆಗೆ ನಿಜವಾದ ಕಾರಣ ಏನೆಂಬ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ