ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ ಖಾಂಡ್ಯ ಬೇರೆ ರಾಜ್ಯದಲ್ಲಿ ತಲೆ ಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈಗಾಗಲೇ ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದರು.
ತೇಜಸ್ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಮತ್ತು 10 ಲಕ್ಷ ರೂಪಾಯಿ ಹಣ ಪಡೆದಿದ್ದಾರೆ ಎಂಬ ಆರೋಪ ಕಲ್ಲಪ್ಪ ಅವರ ಮೇಲೆ ಕೇಳಿ ಬಂದಿತ್ತು. ಇದರಿಂದ ಮನನೊಂದು ಕಲ್ಲಪ್ಪ ಹಂಡಿಭಾಗ್ ಅವರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಕಲ್ಲಪ್ಪ ಆತ್ಮಹತ್ಯೆಗೆ ನಿಜವಾದ ಕಾರಣ ಏನೆಂಬ ಬಗ್ಗೆ ತನಿಖೆಯ ನಂತರವೇ ತಿಳಿದು ಬರಲಿದೆ.