ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೇಕೆ ವಹಿಸಿಲ್ಲ?: ರಾಜ್ಯ ಸರಕಾರಕ್ಕೆ ಸುಪ್ರೀಂ ನೋಟಿಸ್

ಶುಕ್ರವಾರ, 6 ಜನವರಿ 2017 (10:20 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಏಕೆ ಸಿಬಿಐ ತನಿಖೆಗೆ ವಹಿಸಲಿಲ್ಲ ಎಂಬುವುದಕ್ಕೆ ಕಾರಣ ನೀಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಗಣಪತಿ ಅವರ ತಂದೆ ಕುಶಾಲಪ್ಪ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.
 
ನ್ಯಾಯಮೂರ್ತಿಗಳಾದ ಆದರ್ಶ ಕುಮಾರ್ ಗೋಯೆಲ್ ಹಾಗೂ ಯು.ಯು.ಲಲಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ ಆರು ವಾರದೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. 
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಜುಲೈ 7ರ ಸಾಯಂಕಾಲ ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ. ನನಗೆನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ