ಮುಖ್ಯಮಂತ್ರಿಯವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆದಿದ್ದು, ಆ ವೇಳೆ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಕಳೆದ ಬಾರಿ ಒಂದು ಜೊತೆ ಸಮವಸ್ತ್ರ ವಿತರಿಸಿ ಕೊನೆಯಲ್ಲಿ ಮತ್ತೊಂದು ಜೊತೆ ವಿತರಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸರಿಯಾಗಿ ತಲುಪಿರಲಿಲ್ಲ. ಇದನ್ನು ಅರಿತ ಸಿಎಂ ಕುಮಾರಸ್ವಾಮಿ ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.