ನೇಪಾಳ ಭೂಕಂಪ: ಪ್ರಧಾನಿ ನೇತೃತ್ವದಲ್ಲಿ ಪರಿಶೀಲನಾ ಸಭೆ

ಮಂಗಳವಾರ, 28 ಏಪ್ರಿಲ್ 2015 (11:39 IST)
ನೇಪಾಳ ಹಾಗೂ ಭಾರತದಲ್ಲಿ ಭೂಕಂಪ ಸಂಭವಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸಂಪುಟ ಸಹೋಗ್ಯೋಗಿಗಳೊಂದಿಗೆ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. 
 
ಸಭೆಯು ರಾಷ್ಟ್ರ ರಾಜಧಾನಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ಭೂಕಂಪ ಹಿನ್ನೆಲೆಯಲ್ಲಿ ನೇಪಾಳ ಹಾಗೂ ಭಾರತದಲ್ಲಿ ಕೈಗೊಂಡಿರುವ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಪರಾಮರ್ಶೆ ನಡೆಸಲಾಗುತ್ತಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಎಲ್ಲಾ ಇಲಾಖೆಗಳ ಉನ್ನತಾಧಿಕಾರಿಗಳು ಭಾಗವಹಿಸಿದ್ದಾರೆ. 
 
ನೇಪಾಳದಲ್ಲಿ ಕಳೆದ ಏಪ್ರಿಲ್ 25ರಿಂದ ನಿರಂತರವಾಗಿ ಭೂಕಂಪ ಸಂಭವಿಸುತ್ತಿರುವ ಪರಿಣಾಮ ಸಾಕಷ್ಟು ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣಾ ಕಾರ್ ನಡೆಯುತ್ತಿದ್ದು, ಎಲ್ಲಾ ಜವಾಬ್ದಾರಿಯನ್ನು ಭಾರತ ಸರ್ಕಾರವೇ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶೀಲನಾ ಸಭೆ ಕರೆಯಲಾಗಿದೆ. 

ವೆಬ್ದುನಿಯಾವನ್ನು ಓದಿ