ಡಿಕೆ ಶಿವಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ ಇಡಿ

ಸೋಮವಾರ, 6 ಜನವರಿ 2020 (10:32 IST)
ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಜನವರಿ 13ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.



2013-14ರಲ್ಲಿ ನಡೆಸಿದ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಉದ್ದೇಶದಿಂದ  ಸಮನ್ಸ್ ಜಾರಿ ಮಾಡಿದ ಇಡಿ ವಿಚಾರಣೆಗೆ ದೆಹಲಿಗೆ ಆಗಮಿಸುವಂತೆ ಸೂಚನೆ ನೀಡಿದೆ. ಆದಕಾರಣ ಡಿಕೆ ಶಿವಕುಮಾರ್ ತಡರಾತ್ರಿ ದೆಹಲಿಯಲ್ಲಿ ವಕೀಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹಾಗೇ ಜನವರಿ 15ರಂದು ದೆಹಲಿ ಹೈಕೋರ್ಟ್ ನಲ್ಲೂ ವಿಚಾರಣೆ ನಡೆಯಲಿದೆ ಎನ್ನಲಾಗಿದೆ.


ಅಲ್ಲದೇ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಇಂದು ಸುಪ್ರೀಂಕೋರ್ಟ್ ಡಿಕೆಶಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಐಟಿ ಅಧಿಕಾರಿಗಳು 120ಬಿ ಅಡಿ ಪ್ರಕರಣ ದಾಖಲಿಸಿದ್ದು, ಹೈಕೋರ್ಟ್ ನಲ್ಲಿ ಡಿಕೆಶಿ ಅರ್ಜಿ ವಜಾಗೊಂಡಿತ್ತು. ಆದಕಾರಣ 120ಬಿ ಸೆಕ್ಷನ್ ಕೈಬಿಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಕಾರಣ ಇಂದು ಅರ್ಜಿ ವಿಚಾರಣೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ