ಶಿಕ್ಷಣ ನೀತಿ ಪೀಳಿಗೆ ಭವಿಷ್ಯಕ್ಕೆ ಉಜ್ವಲಗೊಳಿಸಲಿದೆ : ಗೆಹ್ಲೋಟ್

ಗುರುವಾರ, 1 ಸೆಪ್ಟಂಬರ್ 2022 (09:33 IST)
ಮಂಗಳೂರು : ನವ ಭಾರತ ನಿರ್ಮಾಣದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪಾತ್ರ ನಿರ್ಣಾಯಕವಾಗಿರುತ್ತದೆ.

ಈ ನೀತಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತವಾಗಿಸುತ್ತದೆ. ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸ್ವಾಯತ್ತತೆಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ಆದ್ಯತೆಯ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುವ ಈ ಶಿಕ್ಷಣ ನೀತಿಯ ಗುರಿಯು ಎಲ್ಲರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು.

ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸುವಲ್ಲಿ ಮತ್ತು ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸುವಲ್ಲಿ ನೀವು ನಿಮ್ಮ ಪಾತ್ರವನ್ನು ಮಾಡಬೇಕು, ಭಾರತವನ್ನು ಜಾಗತಿಕ ಜ್ಞಾನ-ಶಕ್ತಿಯನ್ನಾಗಿ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ