ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಕೊಲೆ ಅತ್ಯಾಚಾರ, ಡ್ರಗ್ಸ್ ಮಾಫಿಯಾ ಕೈ ಮೀರಿ ಹೋಗಿದ್ದು, ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಬಿಜೆಪಿ ಪೋಸ್ಟ್ ಹಂಚಿ ಟ್ರೋಲ್ ಮಾಡುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗಿವೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ ಈ ಟ್ರೋಲ್ ಮಾಡಲಾಗುತ್ತಿದೆ.
ಪೋಸ್ಟ್ ಹಂಚಿ ಬರೆದುಕೊಂಡಿರುವ ಬಿಜೆಪಿ, ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು.
ಹುಬ್ಬಳ್ಳಿಯ ವೀರಾಪುರ ಓಣಿಯ ಕುಮಾರಿ ಅಂಜಲಿ ಅಂಬಿಗೇರ ಕೊಲೆ ಬೆನ್ನಲ್ಲೇ ವಿಪಕ್ಷ ನಾಯಕರು ರಾಜ್ಯದಲ್ಲಿ ದಿನೇ ದಿನೇ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
ಈ ಸಂಬಂಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಕ್ಸ್‌ನಲ್ಲಿ ಬರೆದು, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು ಈ ಕೂಡಲೇ ರಾಜ್ಯ ಸರ್ಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.