ಚುನಾವಣಾ ಬಾಂಡ್‌ ಅಕ್ರಮ ಆರೋಪ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದು

Sampriya

ಮಂಗಳವಾರ, 3 ಡಿಸೆಂಬರ್ 2024 (17:57 IST)
ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕರ ಮೇಲೆ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್‌ ರಿಲೀಫ್ ಸಿಕ್ಕಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಆದರ್ಶ್‌ ಅಯ್ಯರ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧದ ಆರೋಪ ಮಾಡಿ, ದೂರು ದಾಖಲಿಸಿದ್ದರು.

ಇದನ್ನು ರದ್ದುಪಡಿಸುವಂತೆ ನಿರ್ಮಲಾ, ಕಟೀಲ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಇಂದು (ಡಿಸೆಂಬರ್ 03) ಎಫ್​ಐಆರ್​ ರದ್ದುಪಡಿಸಿ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ ಮೂಲಕ ದಾಳಿ ಮಾಡಿಸುವುದಾಗಿ ಬೆದರಿಕೆಯೊಡ್ಡಿ ಪ್ರತಿಷ್ಠಿತ ಕಂಪೆನಿಗಳಿಂದ ಸುಮಾರು 8 ಸಾವಿರ ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿರುವ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಜಾರಿ ನಿರ್ದೇಶಾನಲಯ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹಾಗೂ ಇತರೆ ಬಿಜೆಪಿ ಮುಖಂಡರ ವಿರುದ್ಧ ಆರ್‌.ಅಯ್ಯರ್‌ ಎಂಬುವರು ಮ್ಯಾಜಿಸ್ಟ್ರೇಟ್ ಕೋರ್ಟ್​​ಗೆ ಖಾಸಗಿ ದೂರು ನೀಡಿದ್ದರು. ಬಳಿಕ ಕೋರ್ಟ್​ ಸೂಚನೆ ಮೇರೆಗೆ ತಿಲಕ್‌ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ