ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್‌ಗೆ ಮತಹಾಕುವಂತೆ ಕೇಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿರುದ್ಧ ಬಿಜೆಪಿ ಚುನಾವಣಾ ಯೋಗಕ್ಕೆ ದೂರು ನೀಡಿದೆ.
ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್‌ಗೆ ಮತದಾನ ಮಾಡುವಂತೆ ಡಿ ಕೆ ಸುರೇಶ್ ಅವರು ಅಪಾರ್ಟ್‌ಮೆಂಟ್‌ನಲ್ಲಿ ಚುನಾವಣೆ ಪ್ರಚಾರ ಮಾಡುವ ವೇಲೆ 'ನಿಮಗೆ ಹಕ್ಕುಪತ್ರ ನೀಡಬೇಕಾದರೆ, ಕಾವೇರಿ ನೀರು ಬೇಕಿದ್ದರೆ ನನ್ನ ತಮ್ಮನಿಗೆ ಮತ ಹಾಕಿ' ಎಂದು ಕೇಳಿರುವ ಡಿಕೆಶಿ ಮಾತನಾಡಿದ 3 ನಿಮಿಷದ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಈ ಸಂಬಂಧ ಇದೀಗ ಬಿಜೆಪಿ ನಿಯೋಗ ಉಪಮುಖ್ಯಮಂತ್ರಿ ಡಿಕೆ ಸುರೇಶ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಡಿಕೆಶಿ ನೀಡಿದ ಭಾಷಣ ಹೀಗಿದೆ: ನಿಮಗೆ ನನ್ನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ, ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್‌ಮೆಂಟ್‌ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ?. ನಿಮ್ಮ ಬೂತ್ ಆರ್ಆರ್ ನಗರದಲ್ಲಿದೆ. 2-3 ಬೂತ್ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ ಎಂದು ಕೇಳಿದ್ದರು.
ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಅದಲ್ಲದೆ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊತ್ವಾಲ್ ಬ್ರದರ್ಸ್‌ಗಳ ಗೂಂಡಾಗಿರಿ ದಿನೇ ದಿನೇ ಹೆಚ್ಚಾಗುತ್ತಿದೆ.
ನಿನ್ನೆ ರೈತನ ಹೊಲ ಸುಟ್ಟು, ರೈತನಿಗೆ ಗನ್ ಪಾಯಿಂಟ್ ಇಟ್ಟು ವಾತಾವರಣವನ್ನು ಭಯಭೀತಗೊಳಿಸಿದ್ದರು.
ಇಂದು ಅಪಾರ್ಟ್ಮೆಂಟ್ ನಿವಾಸಿಗಳ ಸಭೆ ನಡೆಸಿ ನೀವು @DKSureshINCಗೆ ವೋಟು ಹಾಕಿಲ್ಲವೆಂದರೆ ನಿಮಗೆ ನೀರು ಕೊಡುವುದಿಲ್ಲ, ಹಕ್ಕು ಪತ್ರ ನೀಡುವುದಿಲ್ಲ ಎಂದು ನೇರವಾಗಿಯೇ ಡಿಸಿಎಂ @DKShivakumar
ಅವರೇ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ.
ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ಜನತೆ ಏಪ್ರಿಲ್ 26 ರಂದು ಅಂತಿಮ ಮೊಳೆ ಹೊಡೆಯುವುದು ಖಚಿತ -ನಿಶ್ಚಿತ-ಖಂಡಿತ.