ಸೋಶಿಯಲ್ ಮೀಡಿಯಾದಲ್ಲಿ ಚುನಾವಣಾ ಪ್ರಚಾರ ಮಾಡುವಂತಿಲ್ಲ- ಚುನಾವಣಾ ಆಯೋಗದಿಂದ ಎಚ್ಚರಿಕೆ

ಸೋಮವಾರ, 11 ಮಾರ್ಚ್ 2019 (17:21 IST)
ಬೆಂಗಳೂರು : ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ  ಮುಹೂರ್ತ ಫಿಕ್ಸ್ ಮಾಡಿದ್ದು, ಅದರ  ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.


ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಕರೆದು ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ವಾಟ್ಸ್ ಆಯಪ್, ಫೇಸ್ ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.


ಒಂದು ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಮಾಡಿದ್ದಲ್ಲಿ, ಜೈಲು ಶಿಕ್ಷೆ ವಿಧಿಸುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ