ಪ್ರಿಯಾಂಕಾ ಕ್ರೇಜಿವಾಲ್‌ಗೆ ಚುನಾವಣಾ ಆಯೋಗ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧೀಕೃತ ಹಾಗೂ ಸುಳ್ಳು ಅಪಾದನೆ ಮಾಡಿದ ಆರೋಪದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಪ್ರಧಾನಿ ಅವರನ್ನು ಅವಹೇಳನ ಮಾಡಲಾಗಿದೆ ಎನ್ನುವ ಆರೋಪದಲ್ಲಿ ಆಮ್ ಆದ್ಮ ಪಕ್ಷಕ್ಕೂ ಶೋಕಾಸ್ ನೋಟಿಸ್ ನೀಡಲಾಗಿದೆ.
ಮಧ್ಯಪ್ರದೇಶದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧೀಕೃತ ಹಾಗೂ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು. ಈ ಬಗ್ಗೆ ನವೆಂಬರ್ 16ರ ರಾತ್ರಿ 8ರ ಒಳಗೆ ಉತ್ತರ ನೀಡಬೇಕು ಎಂದು ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಅಮ್ ಆದ್ಮ ಪಕ್ಷಕ್ಕೂ ಅದೇ ದಿನದ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ.