ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ: ಚುನಾವಣಾ ಆಯೋಗ ನೋಟಿಸ್

Krishnaveni K

ಸೋಮವಾರ, 1 ಏಪ್ರಿಲ್ 2024 (12:30 IST)
ಮಂಗಳೂರು: ರಂಜಾನ್ ಹಬ್ಬದ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ ಮಾಡಿದ್ದಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಈ ಘಟನೆ ಮಂಗಳೂರು ಹೊರವಲಯದ ಮುಡಿಪುವಿನಲ್ಲಿ ನಡೆದಿದೆ.

ಸಾರ್ವಜನಿಕ ಸ್ಥಳದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ ಆಯೋಜಕ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ. ಮುಡಿಪುವಿನಲ್ಲಿ ಆಟೋ ಚಾಲಕರಿಗಾಗಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಈ ಇಫ್ತಾರ್ ಕೂಟದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸಾರ್ವಜನಿಕ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.  ಇದೂ ಕೂಡಾ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣವಾಗಿದೆ. ಈ ಹಿನ್ನಲೆಯಲ್ಲಿ ಕಾರಣ ಕೇಳಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಕೆಲವು ಸಮಯದ ಹಿಂದೆ ಬೆಂಗಳೂರಿನಲ್ಲಿ ರಸ್ತೆ ಬಂದ್ ಮಾಡಿ ನಮಾಜ್ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬಗ್ಗೆ ಕೇಸ್ ದಾಖಲಾಗಿತ್ತು. ಇದೀಗ ಸಾರ್ವಜನಿಕ ಸ್ಥಳದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದಕ್ಕೆ ನೋಟಿಸ್ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ