ಎಲೆಕ್ಷನ್ ಎಫೆಕ್ಟ್: ಅಪಾರ ಪ್ರಮಾಣದ ಮದ್ಯ ವಶ
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 52 ಲೀಟರ್ ಸೇಂದಿ 12252.350 ಲೀಟರ್ ಮದ್ಯವನ್ನು ಜಪ್ತಿಮಾಡಿದ್ದಾರೆ.
ಒಟ್ಟು 14,81, 322 ಮೌಲ್ಯದ ಮದ್ಯ ವಶಕ್ಕೆ ಪಡೆದುಕೊಳ್ಳಲಾಗಿದೆ. 9 ದ್ವಿಚಕ್ರ ವಾಹನಗಳು ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು ಅಕ್ರಮ ದಂಧೆಕೋರರಿಗೆ ಶಾಕ್ ಮುಟ್ಟಿಸಿದ್ದಾರೆ.
3,75,000 ರೂ ಬೆಲೆ ಬಾಳುವ ದ್ವಿಚಕ್ರ ವಾಹನಗಳ ಜಪ್ತಿ ಮಾಡಲಾಗಿದೆ. ಹದಿಮೂರು ಮಂದಿ ದಂಧೆಕೋರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.