ಇಂದು ಕೆಎಂಎಫ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಚುನಾವಣೆಯಿಂದ ಹಿಂದೆ ಸರಿದ ಹೆಚ್​.ಡಿ. ರೇವಣ್ಣ

ಶನಿವಾರ, 31 ಆಗಸ್ಟ್ 2019 (11:33 IST)
ಬೆಂಗಳೂರು : ಇಂದು ಕೆಎಂಎಫ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಈ ಚುನಾವಣೆಯಲ್ಲಿ ಹಿಂದೆ ಸರಿದ ಹಿನ್ನಲೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.




ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಹಾಗೂ ಕಾಂಗ್ರೆಸ್​ನಿಂದ ಭೀಮಾ ನಾಯಕ್ ಕಣ್ಣಿಟ್ಟಿದ್ದು, ಈ ಸ್ಥಾನಕ್ಕಾಗಿ ಕಿತ್ತಾಟ ಶುರುಮಾಡಿದ್ದರು. ಆದಕಾರಣ ಜು. 29ರಂದು ನಡೆಯಬೇಕಾಗಿದ್ದ ಕೆಎಂಎಫ್​ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಬಿಜೆಪಿ ಸರ್ಕಾರ ಮುಂದೂಡಿತ್ತು.


ಆದರೆ ಇಂದು ಕೆಎಂಎಫ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಜತೆಗೆ ಗುರುತಿಸಿಕೊಂಡಿರುವ ನಿರ್ದೇಶಕರೂ ಬಾಲಚಂದ್ರ ಜಾರಕಿಹೊಳಿ ಬೆಂಬಲಿಸಲಿದ್ದಾರೆ ಎನ್ನಲಾಗುತ್ತಿದೆ. ಆದಕಾರಣ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗುವ ಹಿನ್ನೆಲೆಯಲ್ಲಿ ಚುನಾವಣೆಗೆ ನಿಂತು ಸೋಲುವ ಭಯದಿಂದ ಹೆಚ್​.ಡಿ. ರೇವಣ್ಣ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ