ಮೇಲ್ಮನೆ ಉಪ ಸಭಾಪತಿ ಚುನಾವಣೆ: ಯಾರಿಗೆ ಒಳಿಯಲಿದೆ ಸ್ಥಾನ ?

ಶುಕ್ರವಾರ, 31 ಜುಲೈ 2015 (11:36 IST)
ರಾಜ್ಯದ ಮೇಲ್ಮನೆಯಾದ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಉಪ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಈಗಾಗಲೇ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ. 
 
ಮರಿತಿಬ್ಬೇಗೌಡ ಅವರು ಇಂದು ಸದನದ ಮುಖ್ಯ ಕಾರ್ಯದರ್ಶಿ ಅವರಿಗೆ ತಮ್ಮ ನಾಮಪತ್ರವನ್ನು ಸ್ಲಲಿಸಿದ್ದು, ಈ ವೇಳೆ ಪರಿಷತ್‌ನ ವಿರೋಧ ಪಕ್ಷದ ನಾಯಕ, ಬಿಜೆಪಿ ಸದಸ್ಯ ಕೆ.ಎಸ್.ಈಶ್ವರಪ್ಪ ಅವರು ಸಾಥ್ ನೀಡಿದ್ದರು. ಬಿಜೆಪಿಯು ಜೆಡಿಎಸ್‌ನೊಂದಿಗೆ ಕೈ ಜೋಡಿಸಿರುವ ಕಾರಣ ಬಿಜೆಪಿಯಿಂದ ಯಾವುದೇ ಅಭ್ಯರ್ಥಿ ಕಣಕ್ಕಿಳಿದಿಲ್ಲ. 
 
ಇನ್ನು ಮೂಲಗಳ ಪ್ರಕಾರ, ಕಾಂಗ್ರೆಸ್ ಸದಸ್ಯ ಧರ್ಮಸೇನಾ ಅವರೂ ನಾಮಪತ್ರವನ್ನು ಸಲ್ಲಿಸುತ್ತಾರೆ ಎಂದು ಹೇಳಲಾಗಿದ್ದು, ಒಂದು ವೇಳೆ ಸಲ್ಲಿಸಿದಲ್ಲಿ ಚುನಾವಣೆಯಲ್ಲಿ ಯಾರು ಜಯ ಸಾಧಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
 
ಇನ್ನು ನಾಮಪತ್ರ ಸಲ್ಲಿಸಲು ಇಂದು ಮಧ್ಯಾಹ್ನ 12.30ರ ವರೆಗೆ ಅವಕಾಶವಿದೆ. ಒಂದು ವೇಳೆ ಧರ್ಮಸೇನಾ ನಾಮಪತ್ರ ಸಲ್ಲಿಸಿಲ್ಲ ಎಂದಾದಲ್ಲಿ ಮರಿತಿಬ್ಬೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. 

ವೆಬ್ದುನಿಯಾವನ್ನು ಓದಿ