ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಯಾರೆಂದು ಪ್ರಕಟಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ಅವರು ಬಿಜೆಪಿ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಿಡಿ ಕಾರಿದ್ರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಯಾರನ್ನಾದರೂ ಸಿಎಂ ಮಾಡಲಿ. ಅದು ಅವರ ಆಂತರಿಕ ವಿಚಾರ. ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.ಮುಂದಿನ ವಾರ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ. ಒಂದು ವಾರ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು, ಜನರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದ ಅವರು, ಕಾಂಗ್ರೆಸ್ ಸಿಎಂ ಆಯ್ಕೆ ವಿಷಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು