ನಗರದಲ್ಲಿ ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಗಳನ್ನು ಮರಾಠಿ ಭಾಷೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಎಂಇಎಸ್ ಸದಸ್ಯರು ಒತ್ತಾಯಿಸಿದ್ದಾರೆ. ಆಡಳಿತ ಭಾಷೆಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಸುತ್ತೇನೆ, ಗದ್ದಲ ಮಾಡಿದರೆ ಸಭೆಯಿಂದ ಹೊರಕಟ್ಟುತ್ತೇನೆ ಎಂದು ಚುನಾವಣಾಧಿಕಾರಿ ರಾಜಶ್ರೀ ಜೈನಾಪುರ ಎಂಇಎಸ್ ಸದಸ್ಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.