ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

ಶುಕ್ರವಾರ, 9 ಫೆಬ್ರವರಿ 2018 (10:50 IST)
ಮಂಡ್ಯ : ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ.


ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು,’ ವಿಧಾನಸಭಾ ಚುನಾವಣೆಯಲ್ಲಿ 214 ಕ್ಷೇತ್ರಗಳಲ್ಲಿ ಇಪ್ಪತ್ತು ಕ್ಷೇತ್ರಗಳನ್ನು ಬಿಎಸ್‍ಪಿಗೆ ಬಿಟ್ಟುಕೊಡುವಂತೆ ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬಿಎಸ್‍ಪಿಯಿಂದ ಬೆಂಬಲ ಸಿಗಲಿದೆ. ಮೈತ್ರಿ ವಿಚಾರವಾಗಿ ಸಿಪಿಐ ಮತ್ತು ಸಿಪಿಎಂ ಜೊತೆ ಕೂಡ ಚರ್ಚೆ ನಡೆಯುತ್ತಿದೆ. ಅವರು ಒಪ್ಪಿಗೆ ನೀಡಿದರೆ ಅವರ ಜೊತೆ ಕೂಡ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಕೆಲವು ಕ್ಷೇತ್ರದಲ್ಲಿ ಬಿಎಸ್‍ಪಿ ಅಭ್ಯರ್ಥಿಗಳು ಈಗಾಗಲೇ ಜನತೆಯ ಆಶೀರ್ವಾದ ಪಡೆದಿದ್ದಾರೆ. ಇಂತಹ ಕ್ಷೇತ್ರಗಳನ್ನು ಗುರುತಿಸಿ ಇಪ್ಪತ್ತು ಕ್ಷೇತ್ರಗಳನ್ನು ಬಿಟ್ಟುಕೊಡುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ