ಬೆಂಗಳೂರು : ಕರ್ನಾಟಕದನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.
8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.
ಒಟ್ಟು 63 ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಅದರ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.