ಲೋಕಸಭೆ ಚುನಾವಣೆ ಬಳಿಕ ಮತ್ತೆ ಕರೆಂಟ್ ಬಿಲ್ ಜಾಸ್ತಿ

Krishnaveni K

ಗುರುವಾರ, 25 ಜನವರಿ 2024 (17:23 IST)
ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿಯಾಗಲಿದೆಯಾ? ಹೀಗೆಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ನಮ್ಮ ಕಾಲದಲ್ಲಿ ಯಾವತ್ತೂ ಕರೆಂಟ್ ಬಿಲ್ ಜಾಸ್ತಿ ಮಾಡಿರಲಿಲ್ಲ. ಆದರೆ ಈ ಸರ್ಕಾರ ಬಂದ ತಕ್ಷಣವೇ ಕರೆಂಟ್ ಬಿಲ್ ಜಾಸ್ತಿಯಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿಯಾಗಲಿದೆ ಎಂದು ರೇವಣ್ಣ ಭವಿಷ್ಯ ನುಡಿದಿದ್ದಾರೆ.

ಕೆಇಬಿ ಸಾಲದಲ್ಲಿದೆ. ನಾನಿದ್ದಾಗ ಮೀಸಲು ಹಣ ಇಟ್ಟಿದ್ದೆ. ಆದರೆ ರಾಜ್ಯದ ಹಾಲಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸುತ್ತಿದೆ. ಹೀಗಾಗಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಮಾಡೋದು ಗ್ಯಾರಂಟಿ ಎಂದಿದ್ದಾರೆ. ಹಾಸನದಲ್ಲಿ ಪುತ್ರ ಪ್ರಜ್ವಲ್ ಪರ ಚುನಾವಣಾ ಪ್ರಚಾರದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ಭೋಗಸ್
ಕಾಂಗ್ರೆಸ್ ನ ಗ್ಯಾರಂಟಿ ಎಲ್ಲಾ ಭೋಗಸ್. ಚುನಾವಣೆ ಸಂದರ್ಭದಲ್ಲಿ ಆರು ಗ್ಯಾರಂಟಿ ಘೋಷಿಸಿದ್ದರು. ಆದರೆ ಅದು ಎಲ್ಲಿ ಹೋಯಿತು? ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸಾರಾಯಿ ನಿಷೇಧ ಮಾಡಿದ್ದರು. ಆದರೆ ಈಗ ಸಾರಾಯಿ ಅಂಗಡಿಗೆ ಬೇಕಾಬಿಟ್ಟಿ ಲೈಸೆನ್ಸ್ ಕೊಟ್ಟಿದ್ದಾರೆ. ಹೀಗಾಗಿ ಹೆಣ್ಣು ಮಕ್ಕಳೆಲ್ಲಾ ಬೀದಿ ಬೀದಿಯಲ್ಲಿ ಸಾರಾಯಿ ಅಂಗಡಿ ಆಗಿದೆ ಅಂತಿದ್ದಾರೆ.

ಲೋಕಸಭೆ ಚುನಾವಣೆಗೆ ಮಾತ್ರ ಎಲ್ಲಾ ಗ್ಯಾರಂಟಿ ಇರುತ್ತದೆ. ಚುನಾವಣೆ ಮುಗಿದ ಮೇಲೆ ಯಾವ ಗ್ಯಾರಂಟಿಯೂ ಇರಲ್ಲ. ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ