Electricity price hike: ವಿದ್ಯುತ್ ದರ ಏರಿಕೆ, ಗ್ರಾಹಕರಿಗೆ ಶಾಕ್ ಮೇಲೆ ಶಾಕ್

Krishnaveni K

ಗುರುವಾರ, 20 ಮಾರ್ಚ್ 2025 (11:23 IST)
ಬೆಂಗಳೂರು: ಸಾಕಷ್ಟು ದರ ಏರಿಕೆಗಳ ಮಧ್ಯೆ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. ವಿದ್ಯುತ್ ದರ ಏರಿಕೆ ಮಾಡಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ.
 

ವಿದ್ಯುತ್  ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ, ಗ್ರಾಚ್ಯುರಿಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ ಸಿ ಮುಂದಾಗಿದ್ದು ದರ ಹೆಚ್ಚಳದ ಆದೇಶ ಹೊರಡಿಸಿದೆ. ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಬೆಲೆ ಹೆಚ್ಚಳ ಜಾರಿಗೆ ಬರಲಿದೆ.

ಆದರೆ ಈ ಬೆಲೆ ಹೆಚ್ಚಳ ಗೃಹಜ್ಯೋತಿ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಗೃಹಜ್ಯೋತಿ ಬಳಕೆದಾರರಿಗೆ ಎಂದಿನಂತೆ 200 ಯೂನಿಟ್ ಫ್ರೀ ವಿದ್ಯುತ್ ಸಿಗಲಿದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಹೆಚ್ಚಳ ಅನ್ವಯವಾಗಲಿದೆ.

ಇನ್ನು, ವಿದ್ಯುತ್ ದರ ಏರಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದರ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ದೂರಿದೆ. ಇದನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ