ವಿದ್ಯುತ್ ಕಳ್ಳ ಕುಮಾರಸ್ವಾಮಿ
JDS ಕಚೇರಿ ಮುಂದೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಎಂದು ಬರೆದಿರುವ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಮಾಜಿ ಸಿಎಂ ವಿರುದ್ಧ ವಿದ್ಯುತ್ ಅಕ್ರಮ ಆರೋಪ ಕೇಳಿ ಬಂದಾಗಿಂದ ಒಂದಲ್ಲ ಒಂದು ರೀತಿಯಲ್ಲಿ ಕೈ ಕಾರ್ಯಕರ್ತರು ಕಾಲೆಳೆಯುತ್ತಿದ್ದಾರೆ. ಹೆಚ್‌ಡಿಕೆ ಫೋಟೋ ಇರುವ ಪೋಸ್ಟರ್‌ನಲ್ಲಿ ವಿದ್ಯುತ್ ಕಳ್ಳ ಕುಮಾರಸ್ವಾಮಿ ಎಂದು ಬರೆಯಲಾಗಿದೆ.
200 ಯೂನಿಟ್ ಉಚಿತ.. ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ ಎಂದು ಬರೆದು ಕಾಂಗ್ರೆಸ್ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ. ವಿದ್ಯುತ್ ಕಳವು ಪ್ರಕರಣದಲ್ಲಿ ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.