ಕಾನೂನು, ಆರೋಗ್ಯಕ್ಕೆ ಪ್ರಣಾಳಿಕೆಯಲ್ಲಿ ಒತ್ತು
ಬಿಜೆಪಿ ಪ್ರಣಾಳಿಕೆಯಲ್ಲಿ ಕಾನೂನು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗಿದೆ.. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕರೂಪ ನಾಗರಿಕ ಸಂಹಿತೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡಿದೆ.. ಅಧಿಕಾರಕ್ಕೆ ಬಂದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ ಎಂದು ಬಿಜೆಪಿ ಹೇಳಿದೆ.. ಈಗಾಗಲೇ ಕೆಲವು ಬಿಜೆಪಿ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲಿದ್ದು, ರಾಜ್ಯದಲ್ಲೂ ನಾವು ಈ ಕಾನೂನನ್ನು ಜಾರಿಗೆ ತರುತ್ತೇವೆಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ.. ಇನ್ನು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಹತ್ವ ನೀಡಿದೆ.. ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಉತ್ತರ ಕರ್ನಾಟಕದಲ್ಲಿ ಏಮ್ಸ್ ಮಾದರಿಯಲ್ಲಿ ಕಿಮ್ಸ್ ಸ್ಥಾಪನೆ.. ಕೊಪ್ಪಳ, ಯಾದಗಿರಿ, ಚಾಮರಾಜನಗರದಲ್ಲಿ ಏಮ್ಸ್ ಮಾದರಿಯಲ್ಲಿ ಕಿಮ್ಸ್ ಸ್ಥಾಪನೆ ಒತ್ತು ನೀಡಲಾಗಿದೆ.. ಇನ್ನು ಶಿಕ್ಷಣಕ್ಕೆ ಸಂಬಂಧಿಸಿದಂತೆ ಒತ್ತು ನೀಡಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ, UPSC ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್ ಮತ್ತು ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.