ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ವಿಕ್ರಂಗೌಡ ಹತ್ಯೆಯನ್ನು ಸಮರ್ಥಿಸಿದ ಸಿದ್ದರಾಮಯ್ಯ

Sampriya

ಬುಧವಾರ, 20 ನವೆಂಬರ್ 2024 (15:46 IST)
ಬೆಂಗಳೂರು: ಹತ್ಯೆಯಾದ ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಕ್ರಂಗೌಡ ಎನ್‌ಕೌಂಟರ್‌ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಕ್ರಂಗೌಡಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಶರಣಾಗಿರಲಿಲ್ಲ ಹೀಗಾಗಿ ಎನ್‌ಕೌಂಟರ್ ಮಾಡಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ.

ವಿಕ್ರಂಗೌಡನನ್ನು ಹಿಡಿದವರಿಗೆ ಕೇರಳ ಸರ್ಕಾರ ₹ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ಇದೇ ವೇಳೆ ತಿಳಿಸಿದ್ದಾರೆ.

ಉಡುಪಿಯ ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ನಿಗ್ರಹ ದಳ ಮತ್ತು ನಕ್ಸಲರ ಮಧ್ಯೆ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿತ್ತು. ಈ ವೇಳೆ ನಕ್ಸಲ್‌ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ