ಡಿ.ಕೆ.ರವಿ, ಕಲ್ಲಪ್ಪ ಹಂಡಿಭಾಗ್ ರಣಹೇಡಿಗಳು ಎಂದ ಸಚಿವ ಡಿ.ಕೆ.ಶಿವಕುಮಾರ್

ಬುಧವಾರ, 17 ಆಗಸ್ಟ್ 2016 (14:27 IST)
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ, ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರನ್ನು ರಣಹೇಡಿಗಳಿಗೆ ಹೊಲಿಸುವ ಮೂಲಕ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೊಸ ವಿವಾದ ಸೃಷ್ಟಿಸಿದ್ದಾರೆ.
 
ಸ್ವಾತಂತ್ರ್ಯ ದಿನದಂದು ಶಾಲಾ ಮಕ್ಕಳ ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳು ನೃತ್ಯದಲ್ಲಿ ಸ್ವಾತಂತ್ರ್ಯ ಪೂರ್ವ ಹೋರಾಟಗಾರರ ಭಾವಚಿತ್ರವನ್ನು ಪ್ರದರ್ಶಿಸುವ ಬದಲು ಡಿ.ಕೆ.ರವಿ ಹಾಗೂ ಕಲ್ಲಪ್ಪ ಹಂಡಿಭಾಗ್ ಅವರ ಭಾವಚಿತ್ರವನ್ನು ಪ್ರದರ್ಶನ ಮಾಡಿದ್ದಾರೆ. ಆತ್ಮಹತ್ಯೆಗೆ ಶರಣಾಗಿರುವವರ ಭಾವಚಿತ್ರ ಪ್ರದರ್ಶನ ಮಾಡವುದು ಸರಿಯಲ್ಲ. ಆತ್ಮಹತ್ಯೆಗೆ ಶರಣಾಗುವವರು ರಣಹೇಡಿಗಳು ಎಂದು ಹೇಳಿದರು.
 
ಶಾಲಾ ಮಕ್ಕಳ ನೃತ್ಯದಲ್ಲಿ ಡಿ.ಕೆ.ರವಿ ಹಾಗೂ ಕಲ್ಲಪ್ಪ ಹಂಡಿಭಾಗ್ ಭಾವಚಿತ್ರ ಪ್ರದರ್ಶನ ಮಾಡಿರುವ ಕುರಿತು ಡಿಡಿಪಿಐ ಅವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದರು.
 
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ, ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ಸಾವಿನ ಪ್ರಕರಣಗಳು ಇನ್ನೂ ತನಿಖೆ ಹಂತದಲ್ಲಿದ್ದಾಗಲೇ ಆತ್ಮಹತ್ಯೆ ಎಂದು ವ್ಯಾಖ್ಯಾನಿಸಿದ್ದಲ್ಲದೇ ಅವರನ್ನು ರಣಹೇಡಿಗಳಿಗೆ ಹೊಲಿಸುವ ಮೂಲಕ ಇಂಧನ ಸಚಿವರು ಬಹುದೊಡ್ಡ ವಿವಾದಕ್ಕೆ ಕಾರಣರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ