ಪ್ರಿಯಾಂಕ ಗಾಂಧಿ ಸಕ್ರೀಯ ರಾಜಕಾರಣಕ್ಕೆ ಎಂಟ್ರಿ ಕುರಿತು ಈಶ್ವರಪ್ಪ ವ್ಯಂಗ್ಯ

ಭಾನುವಾರ, 27 ಜನವರಿ 2019 (07:28 IST)
ಬೆಂಗಳೂರು : ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು, ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಉತ್ತರ ಪ್ರದೇಶದ ಪೂರ್ವ ವಲಯದ  ಉಸ್ತುವಾರಿಯನ್ನು ನೀಡಲಾಗಿದೆ.


ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು  ಪ್ರಿಯಾಂಕಾ ಗಾಂಧಿ ಎಂಟ್ರಿ ಬಿಜೆಪಿಗೆ ಭಯ ಹುಟ್ಟಿಸಿದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ, ತಾತ, ಅಜ್ಜ, ಅಜ್ಜಿ, ಅಮ್ಮ, ಅಪ್ಪ, ಅಣ್ಣನ ಕೈಯಲ್ಲೇ ಏನು ಮಾಡಲು ಆಗಲಿಲ್ಲ. ಇನ್ನು ಈ ಪ್ರಿಯಾಂಕಾ ಗಾಂಧಿ ಅವರು ಬಂದು ಏನು ಮಾಡುತ್ತಾರೆ ಎಂದು ವ್ಯಂಗವಾಡಿದ್ದಾರೆ.


‘ಮಾಧ್ಯಮಗಳನ್ನು ಟೆರೆರಿಸ್ಟ್‍ಗಳಗೆ ಹೋಲಿಸಿದ ಪ್ರಿಯಾಂಕ್ ಖರ್ಗೆ ಅವರಿಗೆ ರಾಜಕೀಯ ಎಂದರೆ ಏನು ಎಂದು ಗೊತ್ತಿಲ್ಲ. ಇಂತವರನ್ನು ಕಾಂಗ್ರೆಸ್ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿದೆ. ಹೀಗಾಗಿ ಕಾಂಗ್ರೆಸ್ ಇಂದು ಯಾವ ಮಟ್ಟಕ್ಕೆ ಬಂದಿದೆ ಎನ್ನುವುದು ಗೊತ್ತಾಗುತ್ತೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ