ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ವೋಟ್ ಹಾಕಿ ಹಾಗೂ ಇವರನ್ನೆ ಮುಖ್ಯಮಂತ್ರಿ ಮಾಡಿ ಎಂದು ಹೇಳಲು ಬಂದಿಲ್ಲ. ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸಲು ಬಂದಿದ್ದೇವೆ. ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ರಾಯಣ್ಣ ಬ್ರಿಗೇಡ್ ಆರಂಭಗೊಂಡಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ ಹಾಗೂ ವಿರಪ್ಪ ಮೊಯ್ಲಿ ಸೇರಿದಂತೆ ಕೆಲವು ಜನ ರಾಯಣ್ಣ ಬ್ರಿಗೇಡ್ ಬಗ್ಗೆ ಟೀಕೆ ಮಾಡಿದ್ದರು. ಆದರೆ, ದಲಿತ ಹಾಗೂ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ ಬ್ರಿಗೇಡ್ ಆರಂಭಗೊಂಡಿದೆ. ಯಾವುದೇ ಕಾರಣಕ್ಕೂ ಬ್ರಿಗೇಡ್‌ನ ಚಟುವಟಿಗೆಗಳು ನಿಲ್ಲುವುದಿಲ್ಲ ಎಂದು ತಿಳಿಸಿದರು.