ಪ್ರತಿಯೊಂದು ಕ್ಷೇತ್ರಕ್ಕೂ ಪ್ರತ್ಯೇಕ ರಣನೀತಿ, ಗೆಲುವು ನಮ್ಮದೆ: ಪರಮೇಶ್ವರ್

ಶುಕ್ರವಾರ, 10 ನವೆಂಬರ್ 2017 (15:27 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಂದು ವಿಧಾನಸಭೆ ಕ್ಷೇತ್ರಕ್ಕೆ ಪ್ರತ್ಯೇಕ ರಣನೀತಿ ರೂಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರತ್ಯೇಕ ರಣನೀತಿ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ 6.5 ಲಕ್ಷ ಕಾರ್ಯಕರ್ತರು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ 17 ಜಿಲ್ಲೆಗಳಲ್ಲಿ  ಪ್ರವಾಸ ಮಾಡಿದ್ದೇವೆ. ರ್ಯಾಲಿ ನಡೆಸಿಲ್ಲ ಎಂದರು.
 
ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ನಾನು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇವೆ. ಕೆಲವು ಬಾರಿ ಬೇರೆ ಬೇರೆಯಾಗಿಯೂ ಪ್ರವಾಸ ಮಾಡಲಿದ್ದೇವೆ. ಆದರೆ ಗೆಲುವೇ ನಮ್ಮ ಗುರಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ